ಕೊಪ್ಪ

ಎ.ಎಲ್.ಎನ್.ರಾವ್. ಕಾಲೇಜು ವತಿಯಿಂದ ವಿಶ್ವ ಆರೋಗ್ಯ ದಿನಾಚರಣೆ

ಕೊಪ್ಪದ ಎ.ಎಲ್.ಎನ್.ರಾವ್ ಆಯುರ್ವೇದ ಕಾಲೇಜು ವತಿಯಿಂದ ವಿಶ್ವ ಆರೋಗ್ಯ ದಿನಾಚರಣೆ ಅಂಗವಾಗಿ ಬಾಳಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ನಡೆಸಲಾಯಿತು.

avatar

  • April 10, 2025
  • 1 minute read
  • 4 Likes
  • 329 Views
ಎ.ಎಲ್.ಎನ್.ರಾವ್. ಕಾಲೇಜು ವತಿಯಿಂದ ವಿಶ್ವ ಆರೋಗ್ಯ ದಿನಾಚರಣೆ
ಎ.ಎಲ್.ಎನ್.ರಾವ್. ಕಾಲೇಜು ವತಿಯಿಂದ ವಿಶ್ವ ಆರೋಗ್ಯ ದಿನಾಚರಣೆ

ಕೊಪ್ಪದ ಎ.ಎಲ್.ಎನ್.ರಾವ್ ಆಯುರ್ವೇದ ಕಾಲೇಜು ವತಿಯಿಂದ ವಿಶ್ವ ಆರೋಗ್ಯ ದಿನಾಚರಣೆ ಅಂಗವಾಗಿ ಬಾಳಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ನಡೆಸಲಾಯಿತು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜು ಎನ್.ಎಸ್.ಎಸ್.ಘಟಕ ಮತ್ತು ಎ.ಎಲ್.ಎನ್.ರಾವ್.ಆಯುರ್ವೇದ ಕಾಲೇಜು ವೈದ್ಯರು ಜಂಟಿಯಾಗಿ ಕಾರ್ಯಕ್ರಮ ನಡೆಸಿಕೊಟ್ರು. ಆಯುರ್ವೇದ ಕಾಲೇಜಿನ ವೈದ್ಯರಾದ ಡಾ: ಅಶ್ವಿನಿ ಎಸ್‌.ಜಿ.ಮತ್ತು ತಂಡದವರು ಕಾಲೇಜು ವಿದ್ಯಾರ್ಥಿಗಳಿಗೆ ಉಚಿತವಾಗಿ ವೈದ್ಯಕೀಯ ತಪಾಸಣೆ ನಡೆಸಿದರು. ಉದ್ಘಾಟನಾ ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಡಾ: ಅನಂತ್ ಎಸ್.ಮತ್ತು ಎನ್.ಎಸ್.ಎಸ್. ಅಧಿಕಾರಿ ಪ್ರೋ.ನಾಗರಾಜ್ ಮತ್ತು ಆಯುರ್ವೇದ ಕಾಲೇಜು ವೈದ್ಯಕೀಯ ಉಪನ್ಯಾಸಕರು ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.