ಕೊಪ್ಪ ಚಿಕ್ಕಮಗಳೊರು ಜಯಪುರ Sringeri ಕುದುರೆಗುಂಡಿ ತೀರ್ಥಹಳ್ಳಿ ಬಾಳೆಹೊನ್ನೂರು

ಶ್ರೀ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಉಚಿತ ನೇತ್ರ ತಪಾಸಣೆ

ಶ್ರೀ ನರೇಂದ್ರ ಮೋದಿಯವರ 75ನೇ ಜನ್ಮದಿನದ ಪ್ರಯುಕ್ತ ಉಚಿತ ನೇತ್ರ ತಪಾಸಣೆ ಶಿಬಿರ:- ದಿನಾಂಕ 29-09-2025 ರ ಸೋಮವಾರ ದೇಶದ ಪ್ರಧಾನ ಮಂತ್ರಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿಯವರ 75 ನೇ ಜನ್ಮದಿನಾಚರಣೆ ಅಂಗವಾಗಿ ಕೊಪ್ಪ ಮಂಡಲ ಬಿ.ಜೆ.ಪಿ. ವತಿಯಿಂದ ಶಂಕರ ಕಣ್ಣಿನ ಆಸ್ಪತ್ರೆ ಶಿವಮೊಗ್ಗ ಇವರ ವತಿಯಿಂದ ಉಚಿತ ಕಣ್ಣಿನ ತಪಾಸಣಾ ಶಿಬಿರ ಮತ್ತು ಎ.ಎಲ್.ಎನ್.ರಾವ್ ಆಯುರ್ವೇದ ಆಸ್ಪತ್ರೆ ಕೊಪ್ಪ ಇವರ ಸಹಯೋಗದೊಂದಿಗೆ ಉಚಿತ ಬಿ.ಪಿ.ಮತ್ತು ಸಕ್ಕರೆ ಕಾಯಿಲೆ ತಪಾಸಣೆಯನ್ನು ಕೊಪ್ಪ ಪುರಭವನದಲ್ಲಿ ಏರ್ಪಡಿಸಲಾಗಿತ್ತು.

avatar

  • September 29, 2025
  • 1 minute read
  • 2 Likes
  • 265 Views
ಶ್ರೀ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಉಚಿತ ನೇತ್ರ ತಪಾಸಣೆ
ಶ್ರೀ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಉಚಿತ ನೇತ್ರ ತಪಾಸಣೆ

ಶ್ರೀ ನರೇಂದ್ರ ಮೋದಿಯವರ 75ನೇ ಜನ್ಮದಿನದ ಪ್ರಯುಕ್ತ ಉಚಿತ ನೇತ್ರ ತಪಾಸಣೆ ಶಿಬಿರ:-
ದಿನಾಂಕ 29-09-2025 ರ ಸೋಮವಾರ ದೇಶದ ಪ್ರಧಾನ ಮಂತ್ರಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿಯವರ 75 ನೇ ಜನ್ಮದಿನಾಚರಣೆ ಅಂಗವಾಗಿ ಕೊಪ್ಪ ಮಂಡಲ ಬಿ.ಜೆ.ಪಿ. ವತಿಯಿಂದ ಶಂಕರ ಕಣ್ಣಿನ ಆಸ್ಪತ್ರೆ ಶಿವಮೊಗ್ಗ ಇವರ ವತಿಯಿಂದ ಉಚಿತ ಕಣ್ಣಿನ ತಪಾಸಣಾ ಶಿಬಿರ ಮತ್ತು ಎ.ಎಲ್.ಎನ್.ರಾವ್ ಆಯುರ್ವೇದ ಆಸ್ಪತ್ರೆ ಕೊಪ್ಪ ಇವರ ಸಹಯೋಗದೊಂದಿಗೆ ಉಚಿತ ಬಿ.ಪಿ.ಮತ್ತು ಸಕ್ಕರೆ ಕಾಯಿಲೆ ತಪಾಸಣೆಯನ್ನು ಕೊಪ್ಪ ಪುರಭವನದಲ್ಲಿ ಏರ್ಪಡಿಸಲಾಗಿತ್ತು. ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಸುಮಾರು 150 ಹೆಚ್ಚು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಂಡರು. ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಶ್ರೀ ಡಿ.ಎನ್.ಜೀವರಾಜ್, ಕೊಪ್ಪ ಬಿ.ಜೆ.ಪಿ. ಮಂಡಲ ಅಧ್ಯಕ್ಷ ಹೆಚ್.ಕೆ.ದಿನೇಶ್.ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪುಣ್ಯಪಾಲ್, ಶೃತಿ ರೋಹಿತ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಬಿಷೇಜ್ ಭಟ್, ಅರುಣ್ ಶಿವಪುರ, ಪಟ್ಟಣ ಪಂಚಾಯತಿ ಅಧ್ಯಕ್ಷೆ ರೇಖಾ ಪ್ರಕಾಶ್ ,ಉಪಾಧ್ಯಕ್ಷೆ ಗಾಯತ್ರಿ ಶೆಟ್ಟಿ, ಬಿ.ಜೆ.ಪಿ.ಮುಖಂಡರಾದ ಶ್ರೀ ಬಿ.ಕೆ.ಗಣೇಶ್ ರಾವ್, ಕೊಪ್ಪ ನಗರ ಘಟಕದ ಅಧ್ಯಕ್ಷ ಶ್ರೀ ದಿವಾಕರ್ ,ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಸಿ.ಹೆಚ್. ಮಹಿಳಾ ಮೋರ್ಚಾ ಅಧ್ಯಕ್ಷೆ ಅನಸೂಯಾ ಕೃಷ್ಣಮೂರ್ತಿ, ಲಲಿತಾ ನಾಗೇಂದ್ರ, ಪದ್ಮಾವತಿ ರಮೇಶ್, ಮತ್ತು ಪಟ್ಟಣ ಪಂಚಾಯತಿ ಸದಸ್ಯರಾದ ಇದಿನಬ್ಬ ಇಸ್ಮಾಯಿಲ್, ಗಾಯಿತ್ರಿ ವಸಂತ್, ಸುಜಾತ ವಸಂತ್, ಹೇಮಾವತಿ ಮತ್ತು  ಬಿಜೆಪಿ ಎಲ್ಲಾ ಕಾರ್ಯಕರ್ತರು  ಭಾಗವಹಿಸಿದ್ದರು.